ಅಂಗವಿಲ್ಲದ ಮಂಗಳಾಂಗಿಯ ಮನದಲ್ಲಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗವಿಲ್ಲದ ಮಂಗಳಾಂಗಿಯ ಮನದಲ್ಲಿ
ಶಿವಲಿಂಗದುದಯವ ಕಂಗಳಿಲ್ಲದೆ ಕಂಡು
ಅಂಗವಿಲ್ಲದೆ ಸಂಗವ ಮಾಡಿ
ನಿಸ್ಸಂಗಿಯಾಗಿ ಸರ್ವಸಂಗಕ್ಕೆ ಹೊರಗಾಗಿ
ನಿರ್ವಯಲ ಬೆರಸಲು `ಮಂಗಳ ಮಂಗಳ'ವೆನುತ್ತಿಪ್ಪ ಮಹಾಗಣಂಗಳ ಸಂಗದಲ್ಲಿ ಮೈಮರೆದನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.