ವಿಷಯಕ್ಕೆ ಹೋಗು

ಅಂಗವಿಲ್ಲೆಂಬಲ್ಲಿಯೆ ಅಂಗಶಂಕೆ ಬಿಡದು,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗವಿಲ್ಲೆಂಬಲ್ಲಿಯೆ ಅಂಗಶಂಕೆ ಬಿಡದು
ಲಿಂಗವುಂಟೆಬಲ್ಲಿಯೆ ಲಿಂಗಶಂಕೆ ಬಿಡದು. ಇಲ್ಲೆಂಬುದಕ್ಕೆ ಉಂಟೆಂಬುದೆ ಮರಹು
ಉಂಟೆಂಬುದಕ್ಕೆ ಇಲ್ಲೆಂಬುದೆ ಮರಹು. ಉಂಟಿಲ್ಲೆಂಬುದಳಿದಲ್ಲದೆ ಪ್ರಾಣಲಿಂಗಸಂಬಂಧ ಸ್ವಯವಾಗದು
ಕೂಡಲಚೆನ್ನಸಂಗಯ್ಯನಲ್ಲಿ ಪ್ರಾಣಲಿಂಗಸಂಬಂಧ ನಿನಗೆಲ್ಲಿಯದು ಹೇಳಾ ಸಿದ್ಧರಾಮಯ್ಯ ?