Library-logo-blue-outline.png
View-refresh.svg
Transclusion_Status_Detection_Tool

ಅಂಗವು ಲಿಂಗದಲ್ಲಿ ಸಂಬಂಧವಾದವರ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಗವು ಲಿಂಗದಲ್ಲಿ ಸಂಬಂಧವಾದವರ ಲಿಂಗವೆಂದೇ ಕಾಂಬುದು
`ಕೀಟೋ[s]ಪಿ ಭ್ರಮರಾಯತೇ ಎಂಬ ನ್ಯಾಯದಂತೆ. ಅಂಗವು ಲಿಂಗ ಸೋಂಕಿ ಲಿಂಗವಾಯಿತ್ತಾಗಿ ಲಿಂಗವೆಂದೇ ಕಾಂಬುದು ಅಂಗೇಂದ್ರಿಯಂಗಳೆಂಬುವಿಲ್ಲ
ಅವೆಲ್ಲವೂ ಲಿಂಗೇಂದ್ರಿಯಂಗಳಾದ ಕಾರಣ
ಲಿಂಗವೆಂದೇ ಕಾಂಬುದು. ಸರ್ಪದಷ್ಟಸ್ಯ ಯದ್ದೇಹಂ ತದ್ದೇಹಂ ವಿಷದೇಹವತ್ ಲಿಂಗದಷ್ಟಸ್ಯ ಯದ್ದೇಹಂ ತದ್ದೇಹಂ ಲಿಂಗದೇಹವತ್ ಎಂದುದಾಗಿ ಸರ್ವಾಂಗಲಿಂಗಿ ಕೂಡಲಚೆನ್ನಸಂಗಾ ನಿಮ್ಮ ಶರಣ !