ಅಂಗಸಂಸಾರ ಲಿಂಗದಲ್ಲಿತ್ತು ಅರತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗಸಂಸಾರ ಲಿಂಗದಲ್ಲಿತ್ತು ಅರತು ಕಾಯವೆಂಬ ಸಂಬಂಧ ಸಂಶಯವಳಿದು ನಿಸ್ಸಂದೇಹಿಯಾಗಿಪ್ಪನು ನೋಡಾ ಬಸವಣ್ಣನು. ಪ್ರಾಣ ಭಾವವೆಂಬ ಶಂಕೆ ತಲೆದೋರದೆ ನಿಶ್ಶಂಕನಿಜೈಕ್ಯನಾಗಿಪ್ಪನು ನೋಡಾ ಬಸವಣ್ಣನು. ಆ ಬಸವಣ್ಣನ ಅಂತರಂಗದಲ್ಲಿ ನಿಶ್ಚಿಂತನಿವಾಸಿಯಾಗಿದ್ದೆನು. ಆ ಬಸವಣ್ಣನ ಅಂತರಂಗದಲ್ಲಿ ನಿರಾಲಂಬಜ್ಞಾನಿಯಾಗಿದ್ದೆನು. ಆ ಬಸವಣ್ಣನೊಳಗೆ ನಾನು ಅಳಿದುಳಿದೆನು. ಬಸವಣ್ಣನೆನ್ನ ಅಂತರಂಗದೊಳಗೆ ನಿಜನಿವಾಸಿಯಾಗಿದ್ದನು. ಇದು ಕಾರಣ:ಒಂದಕ್ಕೊಂದ ಬಿಚ್ಚಿ ಬೇರು(ರೆ?) ಮಾಡಬಾರದು ನೋಡಾ. ಗುಹೇಶ್ವರಲಿಂಗದಲ್ಲಿ `ಸಂಗನಬಸವ-ಪ್ರಭು'ವೆಂಬ ಎರಡು ಭಾವಭ್ರಾಂತಿಯಳಿದು
ನಿಭ್ರಾಂತಿ ಎಡೆಗೊಂಡಿತ್ತು ನೋಡಾ ಚನ್ನಬಸವಣ್ಣಾ