ಅಂಗಸೋಂಕೆಂಬುದು ಅಧಮವು. ಉರಸೆಜ್ಜೆಯೆಂಬುದು ಎದೆಯ ಗೂಂಟ. ಕಕ್ಷೆಯೆಂಬುದು ಕವುಚಿನ ತವರುಮನೆ. ಅಮಳೋಕ್ಯವೆಂಬುದು ಬಾಯ ಬಗದಳ. ಮುಖಸೆಜ್ಜೆಯೆಂಬುದು ಪಾಂಡುರೋಗ. ಕರಸ್ಥಳವೆಂಬುದು ಮರವಡದ ಕುಳಿ. ಉತ್ತಮಾಂಗವೆಂಬುದು ಸಿಂಬಿಯ ಕಪ್ಪಡ. ಎಲ್ಲರಿಗೆಯೂ ಸೋಂಕಾಯಿತ್ತು ! ಈ ಹಸಿಯ ಗೂಂಟದಲ್ಲಿ ಕಟ್ಟಿ
ಒಣಗಿದ ಗೂಂಟದಲ್ಲಿ ಬಿಡುವ ಬಾಲಭಾಷೆಯ ಭಂಡರ ನುಡಿಯ ಕೇಳಲಾಗದು ಗುಹೇಶ್ವರಾ.