ಅಂಗುಷ್ಠದಲ್ಲಿ ಸರ್ಪದಷ್ಟವಾಗಲು ಸರ್ವಾಂಗವೆಲ್ಲವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗುಷ್ಠದಲ್ಲಿ ಸರ್ಪದಷ್ಟವಾಗಲು ಸರ್ವಾಂಗವೆಲ್ಲವು ವಿಷಮಯವಾಗಿಪ್ಪುದು ನೋಡಾ. ಶರಣನೆಂಬಂಗದ ಮೇಲೆ ಲಿಂಗದಷ್ಟವಾಗಲು ಆ ಶರಣನ ಸರ್ವಾಂಗವೆಲ್ಲವು ಲಿಂಗವಪ್ಪುದು ತಪ್ಪದು ನೋಡಾ. ಲಿಂಗವನಪ್ಪಿ ಲಿಂಗಸಂಗಿಯಾದ ಅಭಂಗ ಶರಣಂಗೆ ಅನಂಗಸಂಗವುಂಟೆ? ಬಿಡಾ ಮರುಳೇ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.