ವಿಷಯಕ್ಕೆ ಹೋಗು

ಅಂಗೈಯೊಳಗಣ ಲಿಂಗವ ಪೂಜಿಸುತ್ತ,

ವಿಕಿಸೋರ್ಸ್ದಿಂದ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂಗೈಯೊಳಗಣ ಲಿಂಗವ ಪೂಜಿಸುತ್ತ
ಮಂಗಳಾರತಿಗಳನು ತೊಳಗಿ ಬೆಳಗುತ್ತಲಿರ್ದೆ ನೋಡಯ್ಯಾ. ಕಂಗಳ ನೋಟ
ಕರುವಿಟ್ಟ ಭಾವ
ಹಿಂಗದ ಮೋಹ ತೆರಹಿಲ್ಲದಿರ್ದೆ ನೋಡಯ್ಯಾ
ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮನಗಲದ ಪೂಜೆ ಅನುವಾಯಿತ್ತೆನಗೆ.