ಅಂಗೈಯೊಳಗೊಂದು ಅರಳ್ದ ತಲೆಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗೈಯೊಳಗೊಂದು ಅರಳ್ದ ತಲೆಯ ಹಿಡಿದುಕೊಂಡು ಕಂಗಳ ಮುತ್ತ ಪವಣಿಸುವಾಕೆ ನೀನಾರು ಹೇಳಾ ? ಸಂದ ಸಂಪಿಗೆಯರಳ ತುಂಬಿ ಬಂದುಂಬ ಭೇದವನರಿಯದೆ ಹಂಬಲಿಸುವ ಪರಿತಾಪವೇನು ಹೇಳಾ ? ಒಂದೆಂಬೆನೆ ಎರಡಾಗಿದೆ ಎರಡೆಂಬೆನೆ ಒಂದಾಗಿದೆ ಅರಿವಿನೊಳಗಣ ಮರಹಿದೇನು ಹೇಳಾ ? ದುಃಖವಿಲ್ಲದ ಅಕ್ಕೆ
ಅಕ್ಕೆಯಿಲ್ಲದ ಅನುತಾಪ ನಮ್ಮ ಗುಹೇಶ್ವರಲಿಂಗದಲ್ಲಿ ತೋರುತ್ತಿದೆ. ನೀನಾರೆಂದು ಹೇಳಾ ಎಲೆ ಅವ್ವಾ ?