Library-logo-blue-outline.png
View-refresh.svg
Transclusion_Status_Detection_Tool

ಅಂಗೈಯ ಲಿಂಗದಲ್ಲಿ ಕಂಗಳ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಗೈಯ ಲಿಂಗದಲ್ಲಿ ಕಂಗಳ ನೋಟ ಸ್ವಯವಾದ ಇರವ ನೋಡಾ ! ತನ್ನ ಸ್ವಾನುಭಾವದ ಉದಯದಿಂದ ತನ್ನ ತಾನರಿದ ನಿಜಶಕ್ತಿಯ ನೋಡಾ ! ಭಿನ್ನವಿಲ್ಲದರಿವು
ಮನ್ನಣೆಯ ಮಮಕಾರವ ಮೀರಿದ ಭಾವ ! ತನ್ನಿಂದ ತಾನಾದಳು ! ನಮ್ಮ ಗುಹೇಶ್ವರಲಿಂಗದಲ್ಲಿ ಸ್ವಯಲಿಂಗವಾದ ಮಹಾದೇವಿಯಕ್ಕಗಳ ನಿಲವಿಂಗೆ ನಮೋ ನಮೋ ಎನುತಿರ್ದೆನು ಕಾಣಾ ಚನ್ನಬಸವಣ್ಣ.