ಅಂಗೈ ತಿಂದುದೆನ್ನ, ಕಂಗಳು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಗೈ ತಿಂದುದೆನ್ನ
ಕಂಗಳು ಕೆತ್ತಿಹವಯ್ಯಾ
ಬಂದಹರಯ್ಯಾ ಪುರಾತರೆನ್ನ ಮನೆಗೆ
ಬಂದಹರಯ್ಯಾ ಶರಣರೆನ್ನ ಮನೆಗೆ. ಕಂಡ ಕನಸು ದಿಟವಾಗಿ ಜಂಗಮ ಮನೆಗೆ ಬಂದರೆ
ಶಿವಾರ್ಚನೆಯ ಮಾಡುವೆ
ಕೂಡಲಸಂಗಮದೇವಯ್ಯಾ
ನಿಮ್ಮ ಮುಂದೆ. 372