ಅಂಗ ಗುಣವಳಿದು ಲಿಂಗ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಗ ಗುಣವಳಿದು ಲಿಂಗ ಗುಣ ಉಳಿಯಿತ್ತಯ್ಯ. ಆವರಿಸಿತ್ತಯ್ಯ ಪರಮ ಅನುಪಮ ಭಕ್ತಿಸುಖ. ಲಿಂಗಾಂಗವೆಂಬ ಎರಡನರಿಯೆನಯ್ಯ. ಶುದ್ಧ ಸುಜ್ಞಾನ ಜಂಗಮಲಿಂಗ ಗ್ರಾಹಕನಾಗಿ ಪ್ರಾಣಲಿಂಗವೆಂಬ ಎರಡನರಿಯೆನಯ್ಯ. ಎರಡೆರಡೆಂದು ಈ ಹುಸಿಯನೇಕೆ ನುಡಿವರಯ್ಯ. ಇನ್ನೆರಡು ಒಂದಾಯಿತ್ತಾಗಿ ಲೋಕಚಾತುರ್ಯ
ಲೋಕವ್ಯವಹರಣೆ. ಲೋಕಭ್ರಾಂತಿಯ ಮರೆದೆನಯ್ಯ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ
ನಿಮ್ಮಲ್ಲಿ ನಿಬ್ಬೆರಗಾದೆನಯ್ಯಾ.