ವಿಷಯಕ್ಕೆ ಹೋಗು

ಅಂಗ ಸಂಸಾರವಿರಹದೊಳು ಸವೆದು,

ವಿಕಿಸೋರ್ಸ್ದಿಂದ


ಲೇಖಕರು: ChennaBasavanna
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಂಗ ಸಂಸಾರವಿರಹದೊಳು ಸವೆದು
ಲಿಂಗವು ಅವಗ್ರಹಿಸಿಕೊಂಡ ಮೃತ್ತಿಕಾ ಪಂಜರದೊಳಗೆ
ಭುಜಂಗ ತಲೆಯೆತ್ತಿ ನೋಡಲು
ಥಳಥಳನೆ ಹೊಳೆವ ಮಾಣಕ್ಯದ ಬೆಳಗುಗಳೆಸೆಯೆ ಸದ್ಯೋಜಾತನ ಜಟಾಮಕುಟವ ಸುತ್ತಿರ್ದ ಫಣೀಂದ್ರನಲ್ಲದೆ ಮತ್ತಾರೂ ಅಲ್ಲವೆಂದು ಶಿಖರವ ಮೊದಲುಗೊಂಡಗುಳಿಸಲು
ಸುತ್ತಿರ್ದ ಫಣಿಸೂತ್ರವ ಕಂಡು ಚಕ್ಕನೆ ಕದವ ತೆರೆಯಲು ದೃಷ್ಟಿದೃಷ್ಟವಾದ (ಅ)ನಿಮಿಷನ ಕರಸ್ಥಲವ ಕಂಡು ಧೃಷ್ಟತನದಲ್ಲಿ ಲಿಂಗವ ತೆಗೆದುಕೊಂಡಡೆ ಸಂದು ಕಳಾಸಂಗಳು ತಪ್ಪಿ ಅಸ್ಥಿಗಳು ಬಳಬಳನುದುರಲು ಆತನ ಬೆರಗು ನಿಮ್ಮ ಹೊಡೆದು ಖ್ಯಾತಿಯಾಯಿತ್ತು ನೋಡಯ್ಯಾ
ಅಲ್ಲಮಪ್ರಭುವೆಂಬ ನಾಮ ನಿಮಗೆ ! ಭಕ್ತಿದಳದುಳದಿಂದ ಬಂದಿಕಾರರಾಗಿ ಬಂದು ಹೊಕ್ಕಡೆ ಬದನೆಯ ಕಾಯಿಗಳು ಬಾಣಲಿಂಗವಾಗವೆ ನಮ್ಮ ಬಸವಣ್ಣನ ದೃಷ್ಟಿತಾಗಲು ? ಇದು ಕಾರಣ-ಕೂಡಲಚೆನ್ನಸಂಗನಲ್ಲಿ ಅನಿಮಿಷಪ್ರಭುವಿಂಗೆ ಬಸವಣ್ಣ ಗುರುವಾದ ಕಾರಣ ನಾನು ನಿಮಗೆ ಚಿಕ್ಕ ತಮ್ಮ ಕೇಳಾ ಪ್ರಭುವೆ.