ಅಂಜಬೇಡ ಅಳುಕಬೇಡ; ಹೋದವರಾರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಜಬೇಡ ಅಳುಕಬೇಡ; ಹೋದವರಾರು ಇದ್ದವರಾರು ? ಎಲೆ ಮರುಳೆ ! ಒಂದು ಮುಖದಲ್ಲಿಪ್ಪ ದೇವನೊಬ್ಬನೆ. ಹಲವು ಮುಖದಲ್ಲಿಪ್ಪ ದೇವನೊಬ್ಬನೆ. ನಾಮ ಹಲವಲ್ಲದೆ ಕಾರ್ಯ ಒಂದೇ ನೋಡಾ ! ಮನದೊಳಗಣ ಘನವು ತನುವನಗಲುವುದೆ ? ಗುಹೇಶ್ವರಲಿಂಗದಲ್ಲಿ ವಿಯೋಗಕ್ಕೆ ತೆರಹಿಲ್ಲ ಕೇಳಾ
ಸಂಗನಬಸವಣ್ಣ.