Library-logo-blue-outline.png
View-refresh.svg
Transclusion_Status_Detection_Tool

ಅಂಡಾಭರಣರು ಘನವೆಂಬೆನೆ ಘನವೆಂಬೆನೆ

ವಿಕಿಸೋರ್ಸ್ದಿಂದ
Jump to navigation Jump to searchPages   (key to Page Status)   


ಅಂಡಾಭರಣರು ಘನವೆಂಬೆನೆ ? ಅಂಡಾಭರಣರು ಘನವಲ್ಲ. ರುಂಡಾಭರಣರು ಘನವೆಂಬೆನೆ ? ರುಂಡಾಭರಣರು ಘನವಲ್ಲ. ಗಂಗಾಧರರು ಘನವೆಂಬೆನೆ ? ಗಂಗಾಧರರು ಘನವಲ್ಲ. ಗೌರೀವಲ್ಲಭರು ಘನವೆಂಬೆನೆ ? ಗೌರೀವಲ್ಲಭರು ಘನವಲ್ಲ. ಚಂದ್ರಶೇಖರರು ಘನವೆಂಬೆನೆ ? ಚಂದ್ರಶೇಖರರು ಘನವಲ್ಲ. ನಂದಿವಾಹನರು ಘನವೆಂಬೆನೆ ? ನಂದಿವಾಹನರು ಘನವಲ್ಲ. ತ್ರಿಯಂಬಕರು ಘನವೆಂಬೆನೆ ? ತ್ರಿಯಂಬಕರು ಘನವಲ್ಲ. ತ್ರಿಪುರವೈರಿ ಘನವೆಂಬೆನೆ ? ತ್ರಿಪುರವೈರಿ ಘನವಲ್ಲ. ಪಂಚಮುಖರು ಘನವೆಂಬೆನೆ ? ಪಂಚಮುಖರು ಘನವಲ್ಲ. ಫಣಿಕುಂಡಲರು ಘನವೆಂಬೆನೆ ? ಫಣಿಕುಂಡಲರು ಘನವಲ್ಲ. ಶೂಲಪಾಣಿಗಳು ಘನವೆಂಬೆನೆ ? ಶೂಲಪಾಣಿಗಳು ಘನವಲ್ಲ. ನೀಲಲೋಹಿತರು ಘನವೆಂಬೆನೆ ? ನೀಲಲೋಹಿತರು ಘನವಲ್ಲ. ಅದೇನು ಕಾರಣವೆಂದೊಡೆ
ಇಂತಿವರಾದಿಯಾಗಿ ಅನಂತಕೋಟಿ ರುದ್ರಗಣಂಗಳು ಶರಣನ ಸರ್ವಾಂಗದಲ್ಲಿ ಅಡಗಿಹರಾಗಿ ಅಖಂಡೇಶ್ವರಾ
ನಿಮ್ಮ ಶರಣ ಘನಕ್ಕೆ ಘನವೆಂಬೆನಯ್ಯಾ.