ಅಂತರಂಗದಲ್ಲಿ ಅರಿವಾದಡೇನಯ್ಯಾ ಬಹಿರಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂತರಂಗದಲ್ಲಿ ಅರಿವಾದಡೇನಯ್ಯಾ ಬಹಿರಂಗದಲ್ಲಿ ಕ್ರೀ ಇಲ್ಲದನ್ನಕ್ಕ ? ದೇಹವಿಲ್ಲದಿರ್ದಡೆ ಪ್ರಾಣಕ್ಕಾಶ್ರಯವುಂಟೆ ? ಕನ್ನಡಿಯಿಲ್ಲದಿರ್ದಡೆ ತನ್ನ ಮುಖವ ಕಾಣಬಹುದೆ ? ಸಾಕಾರ ನಿರಾಕಾರ ಏಕೋದೇವ
ನಮ್ಮ ಕೂಡಲಚೆನ್ನಸಂಗಯ್ಯನು.