ಅಂತರಂಗದಲ್ಲಿ ಪ್ರಭುದೇವರನೊಳಕೊಂಡ, ಬಹಿರಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂತರಂಗದಲ್ಲಿ ಪ್ರಭುದೇವರನೊಳಕೊಂಡ
ಬಹಿರಂಗದಲ್ಲಿ ಎನ್ನನೊಳಕೊಂಡ; ಈ ಉಭಯಸಂಗ ಮಧ್ಯದಲ್ಲಿ ನಿಜೈಕ್ಯನಾಗಿರ್ದನು. ಪ್ರಸಾದದಲ್ಲಿ ಪರಮಾನಂದ ಸುಖಿ; ಅರಿವಿನಲ್ಲಿ ಕುರುಹಳಿದ ಘನದ ನಿಲವು. ಕೂಡಲಚೆನ್ನಸಂಗಮದೇವಾ ಬಸವಣ್ಣನ ಪಾದಕ್ಕೆ ನಮೋ ನಮೋ ಎಂಬೆನು.