ಅಂತರಂಗದಲ್ಲಿ ಭವಿಯನೊಳಕೊಂಡು, ಬಹಿರಂಗದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂತರಂಗದಲ್ಲಿ ಭವಿಯನೊಳಕೊಂಡು
ಬಹಿರಂಗದಲ್ಲಿ ಭಕ್ತಿಯನೊಳಕೊಂಡು
ಆತ್ಮಸಂಗದಲ್ಲಿ ಪ್ರಸಾದವನೊಳಕೊಂಡು
ಇಪ್ಪ ಭಕ್ತರ ಕಾಣೆನಯ್ಯಾ ನಾನು
ಇಂತಪ್ಪ ಲಿಂಗೈಕ್ಯರ ಕಾಣೆನಯ್ಯಾ. ಅಂತರಂಗದಲ್ಲಿ ಸುಳಿದಾಡುವ ತನುಗುಣಾದಿಗಳ
ಮನಗುಣಾದಿಗಳ
ಪ್ರಾಣಗುಣಾದಿಗಳ ಕಳೆದಲ್ಲಿ ಶರಣರಹರೆ ? ತನು ಮನ ಧನವ ಕೊಟ್ಟಲ್ಲಿ ಭಕ್ತರಹರೆ ? ಉಂಬವರ ಕಂಡು ಕೈನೀಡಿದಡೆ ಪ್ರಸಾದಿಗಳಹರೆ ? ಅಂತರಂಗ ಬಹಿರಂಗ ಆತ್ಮಸಂಗ_ಈ ತ್ರಿವಿಧದ ಭೇದವ ಗುಹೇಶ್ವರಾ ನಿಮ್ಮ ಶರಣ ಬಲ್ಲ.