Library-logo-blue-outline.png
View-refresh.svg
Transclusion_Status_Detection_Tool

ಅಂತರಂಗದೊಳಗಿರ್ದ ನಿರವಯಲಿಂಗವನು ಸಾವಯವಲಿಂಗವ

ವಿಕಿಸೋರ್ಸ್ ಇಂದ
Jump to navigation Jump to search

Pages   (key to Page Status)   

ಅಂತರಂಗದೊಳಗಿರ್ದ ನಿರವಯಲಿಂಗವನು ಸಾವಯವಲಿಂಗವ ಮಾಡಿ
ಶ್ರೀಗುರುಸ್ವಾಮಿ ಕರಸ್ಥಲಕ್ಕೆ ತಂದುಕೊಟ್ಟನಾಗಿ
ಆ ಇಷ್ಟಲಿಂಗವೆ ಅಂತರಂಗವನಾವರಿಸಿ ಅಂತರಂಗದ ಕರಣಂಗಳೆ ಕಿರಣಂಗಳಾಗಿ ಬೆಳಗುವ ಚಿದಂಶವೆ ಪ್ರಾಣಲಿಂಗವು
ಆ ಮೂಲಚೈತನ್ಯವೆ ಭಾವಲಿಂಗವು. ಇದನರಿದು
ನೋಡುವ ನೋಟ ಭಾವಪರಿಪೂರ್ಣವಾಗಿ ತಾನು ತಾನಾದಲ್ಲದೆ
ಇದಿರಿಟ್ಟು ತೋರುವುದಿಲ್ಲವಾಗಿ ಅಖಂಡ ಪರಿಪೂರ್ಣವಪ್ಪ ನಿಜವು ತಾನೆ
ಕೂಡಲಸಂಗಮದೇವ.