ಅಂತರಂಗದ ಅರಿವು ಬಹಿರಂಗದ ಕ್ರಿಯೆ- ಈ ಉಭಯಸಂಪುಟ ಒಂದಾದ ಶರಣಂಗೆ ಹಿಂಗಿತ್ತು ತನುಸೂತಕ ಹಿಂಗಿತ್ತು ಮನಸೂತಕ. ಕೂಡಲಚೆನ್ನಸಂಗಯ್ಯಲ್ಲಿ ಸಂಗವಾದುದು ಸರ್ವೇಂದ್ರಿಯ.