ಅಂಥ ಪಂಚಾಂತಕವೆಂಬ ಬ್ರಹ್ಮಾಂಡವ
ಗೋಚರ
ಲೇಖಕರು: ಬಾಲಸಂಗಯ್ಯ ಅಪ್ರಮಾಣ ದೇವ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಥ ಬ್ರಹ್ಮಾಂಡವ ನಾಲ್ವತ್ತೊಂಬತ್ತುಸಾವಿರದ ನಾನೂರಾ ಎಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಂಚಾಂತಕವೆಂಬ ಭುವನ. ಆ ಭುವನದೊಳು ಅನಂತದೇವಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ನಾಲ್ವತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣ
ಇಂದ್ರಚಂದ್ರಾದಿತ್ಯರು
ಇನ್ನೂರಾ ನಾಲ್ವತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.