ವಿಷಯಕ್ಕೆ ಹೋಗು

ಅಂಥ ಭುವನ. ಬ್ರಹ್ಮಾಂಡವ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಅಂಥ ಬ್ರಹ್ಮಾಂಡವ ಇಪ್ಪತ್ತೈದುಸಾವಿರದ ಇನ್ನೂರನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಏಕರುದ್ರವೆಂಬ ಭುವನ. ಆ ಭುವನದೊಳು ಕಾಲಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಇಪ್ಪತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು
ಇಂದ್ರಚಂದ್ರಾದಿತ್ಯರು
ನೂರಾ ಇಪ್ಪತ್ತೈದುಕೋಟಿ ವೇದಪುರುಷರು
ಮುನೀಂದ್ರರು
ದೇವರ್ಕಳಿಹರು ನೋಡಾ
ಅಪ್ರಮಾಣಕೂಡಸಂಗಮದೇವಾ.