Library-logo-blue-outline.png
View-refresh.svg
Transclusion_Status_Detection_Tool

ಅಂದಂದಿಗೆ ಬಂದ ಧನವನಂದಂದಿಂಗೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂದಂದಿಗೆ ಬಂದ ಧನವನಂದಂದಿಂಗೆ ವೆಚ್ಚವ ಮಾಡಿ ಹಿಂದು ಮುಂದ ಸಮವ ಮಾಡಿ
ಮಧ್ಯ ನಿರಾಳ ಊಧ್ರ್ವ ತಾನಾಗಿದ್ದು ಇಲ್ಲದಂತಿಪ್ಪಡೆ ಇದೇ ತೆರನು ಕಂಡಯ್ಯಾ. ಆರ ವಶವಲ್ಲದ ಪುರುಷನೊಬ್ಬನ ಸಾಧಿಸಿಕೊಳಬಲ್ಲಡೆ ಆ ಹಿರಿಯರಿಬ್ಬರೂ ತನ್ನ ವಶರಪ್ಪರು. ಆ ಹಿರಿಯರಿಬ್ಬರೂ ತನ್ನವರಾದಡೆ ಸರ್ವವೂ ಸಾಧ್ಯವಪ್ಪುದು. ಸರ್ವವೂ ಸಾಧ್ಯವಾದಡೆ ತಾನಿಲ್ಲ. ಬಯಲಹುದಕ್ಕೆ ಇದೇ ಚಿಹ್ನ ನೋಡಾ_ ಹೀಗೆಂದು ನಂಬುವುದು ನಂಬದಿದ್ದಡೆ ಚೆನ್ನಬಸವಣ್ಣನ ಹೊಣೆಯ ಕೊಡುವೆ ಕಾಣಾ ಗುಹೇಶ್ವರಾ.