ಅಂದಂದಿನ ಮಾತನು ಅಂದಂದಿಗೆ

ವಿಕಿಸೋರ್ಸ್ದಿಂದ



Pages   (key to Page Status)   


ಅಂದಂದಿನ ಮಾತನು ಅಂದಂದಿಗೆ ಅರಿಯಬಾರದು. ಹಿಂದೆ ಹೋದ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಮುಂದೆ ಬಪ್ಪ ಯುಗಪ್ರಳಯಂಗಳ ಬಲ್ಲವರಾರಯ್ಯಾ ? ಬಸವಣ್ಣನು ಆದಿಯಲ್ಲಿ ಲಿಂಗಶರಣನೆಂಬುದ ಭೇದಿಸಿ ನೋಡಿ ಅರಿವರಿನ್ನಾರಯ್ಯಾ ? ಲಿಂಗ ಜಂಗಮ ಪ್ರಸಾದದ ಮಹಾತ್ಮೆಗೆ ಬಸವಣ್ಣನೆ ಆದಿಯಾದನೆಂಬುದನರಿದ ಸ್ವಯಂಭು ಜ್ಞಾನಿ
ಗುಹೇಶ್ವರಲಿಂಗದಲ್ಲಿ ಚನ್ನಬಸವಣ್ಣನೊಬ್ಬನೆ.