ವಿಷಯಕ್ಕೆ ಹೋಗು

ಅಂದಣವನೇರಿದ ಸೊಣಗನಂತೆ ಕಂಡಡೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು
ಸುಡು
ಮನವಿದು ವಿಷಯಕ್ಕೆ ಹರಿವುದು
ಮೃಡ ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ಬೇಡುವೆ
ನಿಮ್ಮ ಧರ್ಮ. 34