ಅಂಧಕನು ಓಡ ಹಿಡಿದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ
ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ
ಗುರು ವಾಯುಪ್ರಾಣಿ
ಶಿಷ್ಯ ಲಿಂಗಪ್ರಾಣಿ
ಗುರು ಭೂತದೇಹಿ
ಶಿಷ್ಯ ಲಿಂಗದೇಹಿ
ಗುರು ಅನರ್ಪಿತಭುಂಜಕ
ಶಿಷ್ಯ ಲಿಂಗಾರ್ಪಿತಭುಂಜಕ
ಗುರು ಅಗ್ನಿದಹನಸಂಪತ್ತು
ಶಿಷ್ಯ ಸಿದ್ಧಸಮಾಧಿಸಂಪತ್ತು
ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.