ಅಂಧಕಾರವಾಗಿಹ ಉದಯಾಸ್ತಮಯವಾಗಿಹ ಕತ್ತಲೆಯೊಳು
ಗೋಚರ
ಲೇಖಕರು: ಬಾಲಸಂಗಯ್ಯ ಅಪ್ರಮಾಣ ದೇವ
ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಂಧಕಾರವಾಗಿಹ ಕತ್ತಲೆಯೊಳು ಮಹಾಮೇರುವಿಹುದು ನೋಡಾ. ಆ ಮಹಾಮೇರುವ ಉದಯಾಸ್ತಮಯವಾಗಿಹ ಚಂದ್ರಸೂರ್ಯರು ತಿರುಗುವರು. ಆ ಚಂದ್ರಸೂರ್ಯರ ದೆಸೆಯಿಂದ ಇರುಳು ಹಗಲೆಂಬ ವೃಕ್ಷ ಹುಟ್ಟಿ
ಆ ವೃಕ್ಷಕ್ಕೆ ಅರವತ್ತು ಶಾಖೆಗಳಾದವು ನೋಡಾ. ಒಂದೊಂದು ಶಾಖೆಗಳಲ್ಲಿ ಮುನ್ನೂರರವತ್ತು ಮುನ್ನೂರರವತ್ತು ಗೂಬೆಗಳು ಕುಳಿತು ಕೂಗುತ್ತಿಹವು ನೋಡಾ ಅಪ್ರಮಾಣಕೂಡಲಸಂಗಮದೇವಾ.