ಅಕಲ್ಪಿತನೆಂಬ ಭಕ್ತ ಮಾಡಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಕಲ್ಪಿತನೆಂಬ ಭಕ್ತ ಮಾಡಿದ ಸೈದಾನವ ನೋಡಾ ! ಅನಂತಕೋಟಿ ಅಜಾಂಡಂಗಳೆ ಸೈದಾನವಾಗಿ
ಸವಿಕಲ್ಪಿತ ಸುಖಂಗಳೆಂಬವೆ ಶಾಕವಾಗಿ
ಸರ್ವಸ್ವಾದವೆಂಬುದೆ ಅಭಿಗಾರವಾಗಿ
ಇವೆಲ್ಲವನು ಸಹಜವೆಂಬ ಭಾಜನದಲ್ಲಿ ಎಡೆ ಮಾಡುತ್ತಿರಲು ಉಣಬಂದ ಹಿರಿಯರು ಉಣುತ್ತಿದ್ದರು ನೋಡಾ ! ನಿರ್ವಿಕಲ್ಪವೆಂಬ ಮಹಂತ ಬರಲು ಸೈದಾನವಡಗಿತ್ತು ಭಾಜನ ಉಳಿಯಿತ್ತು. ಆ ಭಾಜನವ ಉತ್ತರನಿರಾಳದಲ್ಲಿ ಅಳವಡಿಸಿಕೊಳಲು ನಿಶ್ಚಳ ಘನಪ್ರಸಾದವಾಯಿತ್ತು ಗುಹೇಶ್ವರಾ.