ಅಕ್ಕಟಕ್ಕಟಾ, ಸಂಸಾರದ ಹಗರಣ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಕ್ಕಟಕ್ಕಟಾ
ಸಂಸಾರದ ಹಗರಣ ಬಂದಾಡಿತ್ತಲ್ಲಾ ? ಅಪ್ಪಾ ಬೊಪ್ಪಾ ಎಂಬ ಚೋಹವು ಅದು ಮೊಟ್ಟಮೊದಲಲ್ಲಿ ಬಂದಾಡಿತ್ತು. ತುಪ್ಪುಳು ತೊಡೆದಂತೆ ಮೀಸೆಯ ಚೋಹವು ಅದು ನಟ್ಟನಡುವೆ ಬಂದಾಡಿತ್ತು. ಮುಪ್ಪು ಮುಪ್ಪು ಎಂಬ ಚೋಹವು ಅದು ಕಟ್ಟಕಡೆಯಲಿ ಬಂದಾಡಿತ್ತು. ನಿಮ್ಮ ನೋಟವು ತೀರಲೊಡನೆ ಜಗದಾಟವು ತೀರಿತ್ತು ಕಾಣಾ ಚೆನ್ನಮಲ್ಲಿಕಾರ್ಜುನಾ.