ವಿಷಯಕ್ಕೆ ಹೋಗು

ಅಕ್ಕ ಕೇಳೌ, ನಾನೊಂದು

ವಿಕಿಸೋರ್ಸ್ದಿಂದ
ಶೀರ್ಷಿಕೆ: vachana saahitya
ವರ್ಷ: 1130-1160 AD
ಪ್ರಕಾಶಕರು: anubhava mantapa
ಮೂಲ: vachana saahitya

ಅಕ್ಕ ಕೇಳೌ
ನಾನೊಂದು ಕನಸ ಕಂಡೆ. ಅಕ್ಕಿ ಅಡಕೆ ಓಲೆ ತೆಂಗಿನಕಾಯ ಕಂಡೆ. ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು ಭಿಕ್ಷಕ್ಕೆ ಮನೆಗೆ ಬಂದುದ ಕಂಡೆನವ್ವಾ. ಮಿಕ್ಕು ಮೀರಿ ಹೋಹನ ಬೆಂಬತ್ತಿ ಕೈವಿಡಿದೆನು. ಚೆನ್ನಮಲ್ಲಿಕಾರ್ಜುನನ ಕಂಡು ಕಣ್ದೆರೆದೆನು.