ಅಗ್ನಿಯೆ ಅಂಗವಾದ ಪ್ರಸಾದಿಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಗ್ನಿಯೆ ಅಂಗವಾದ ಪ್ರಸಾದಿಯಲ್ಲಿ ಪ್ರಾಣಲಿಂಗ ಶರಣ ಐಕ್ಯ ಭಕ್ತ ಮಾಹೇಶ್ವರನಪ್ಪ ಅಂಗಪಂಚಕವು ಗರ್ಭೀಕೃತವಾಗಿ ಆ ಪ್ರಸಾದಿಯಲ್ಲಿ ಶಿವಲಿಂಗ ಸಂಬಂಧವಾಗಿ ಆ ಶಿವಲಿಂಗದಲ್ಲಿಯೆ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗ ಆಚಾರಲಿಂಗ ಗುರುಲಿಂಗವೆನಿಸುವ ಲಿಂಗಪಂಚಕವು ಗರ್ಭೀಕೃತವಾಗಿ ಶಿವಲಿಂಗವೆ ಸರ್ವಾಶ್ರಯವಾಗಿ ಇಂತೀ ಷಡ್ವಿಧಲಿಂಗದಲ್ಲಿ ಬೆರಸಿ ಬೇರಿಲ್ಲದಿರಬಲ್ಲರೆ ಪ್ರಸಾದಿಯೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.