ವಿಷಯಕ್ಕೆ ಹೋಗು

ಅಗ್ನಿಸ್ತಂಭದ ರಕ್ಷೆಯಿದ್ದು ಮನೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಗ್ನಿಸ್ತಂಭದ ರಕ್ಷೆಯಿದ್ದು ಮನೆ ಬೆಂದಿತ್ತಯ್ಯಾ. ಬಲಮುರಿಯ ಶಂಖವಿದ್ದು ಪದ ಹೋಯಿತ್ತಯ್ಯಾ. ಏಕಮುಖ ರುದ್ರಾಕ್ಷಿಯಿದ್ದು ವಿಘ್ನವಾಯಿತ್ತಯ್ಯಾ. ಇವೆಲ್ಲವ ಸಾಧಿಸಿದಡೆ
ಏನೂ ಇಲ್ಲದಂತಾಯಿತ್ತು ಕಾಣಾ ಗುಹೇಶ್ವರಾ.