ವಿಷಯಕ್ಕೆ ಹೋಗು

ಅಗ್ನಿ ಸರ್ವವ್ಯಾಪಕನಾಗಿರುವಂತೆ, ಚಿದ್ವಹ್ನಿರೂಪನಾದ

ವಿಕಿಸೋರ್ಸ್ದಿಂದ
Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅಗ್ನಿ ಸರ್ವವ್ಯಾಪಕನಾಗಿರುವಂತೆ
ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು
ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ಧವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.