ಅಘಟಿತ ಘಟಿತನ ಒಲವಿನ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ
ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ
ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ
ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿ ಕಾದುವೆನು ನಾನು.