ವಿಷಯಕ್ಕೆ ಹೋಗು

ಅಚ್ಚಪ್ರಸಾದಿ ಅಚ್ಚಪ್ರಸಾದಿ ಎಂಬಿರಿ

ವಿಕಿಸೋರ್ಸ್ದಿಂದ


ಲೇಖಕರು: Allama Prabhu
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಚ್ಚಪ್ರಸಾದಿ ಅಚ್ಚಪ್ರಸಾದಿ ಎಂಬಿರಿ ಕೇಳಿರಯ್ಯಾ; ನಿಚ್ಚಕ್ಕೆ ನಿಚ್ಚ ಹುಸಿವ ಹುಸಿಗಳ ಕಂಡೆವಯ್ಯಾ [ನಿಮ್ಮಲ್ಲಿ]. ವಾಯು ಬೀಸದ ಮುನ್ನ
ಆಕಾಶ ಬಲಿಯದ ಮುನ್ನ
ಲಿಂಗಕ್ಕೆ ಅರ್ಪಿತಮುಖವ ಮರೆದಿರಯ್ಯಾ. ಭೋಜನವ ಮಾಡಿ ಭಾಜನವನಿಕ್ಕಿಟ್ಟು ಹೋಹ ಹಿರಿಯರಿಗೆ ಭಂಗ ನೋಡಾ ಗುಹೇಶ್ವರಾ.