ವಿಷಯಕ್ಕೆ ಹೋಗು

ಅಜಕೋಟಿ ಕಲ್ಪ ವರುಷದವರೆಲ್ಲರು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಜಕೋಟಿ ಕಲ್ಪ ವರುಷದವರೆಲ್ಲರು ಹಿರಿಯರೆ ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರು ಹಿರಿಯರೆ ? ನಡುಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ
ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆಲ್ಲರು ಹಿರಿಯರೆ ? ಅನುವನರಿದು
ಘನವ ಬೆರಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲಚೆನ್ನಸಂಗಯ್ಯನಲ್ಲಿ ಬೆರಸಿ ಬೇರಿಲ್ಲದಿಪ್ಪ ಹಿರಿಯತನ ನಮ್ಮ ಮಹಾದೇವಿಯಕ್ಕಂಗಾಯಿತ್ತು.