ಅಜ್ಞಾನವೆಂಬ ತೊಟ್ಟಿಲೊಳಗೆ, ಜ್ಞಾನವೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಜ್ಞಾನವೆಂಬ ತೊಟ್ಟಿಲೊಳಗೆ
ಜ್ಞಾನವೆಂಬ ಶಿಶುವ ಮಲಗಿಸಿ
ಸಕಲ ವೇದಶಾಸ್ತ್ರವೆಂಬ ನೇಣ ಕಟ್ಟಿ
ಹಿಡಿದು ತೂಗಿ ಜೋಗುಳವಾಡುತ್ತಿದ್ದಾಳೆ ಭ್ರಾಂತಿಯೆಂಬ ತಾಯಿ ! ತೊಟ್ಟಿಲು ಮುರಿದು ನೇಣು ಹರಿದು
ಜೋಗುಳ ನಿಂದಲ್ಲದೆ
ಗುಹೇಶ್ವರನೆಂಬ ಲಿಂಗವ ಕಾಣಬಾರದು