ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ ? ನಾನರಿದೆನೆಂಬಾತ ಇದಿರ ಕೇಳಲುಂಟೆ ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ ? ಸೂತಕ ಹಿಂಗದೆ ಸಂದೇಹವಳಿಯದೆ
ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯೂಥ(ಯುತ?) ಬೆಳಗು ಗುಹೇಶ್ವರಾ ನಿಮ್ಮ ಶರಣ !