ಅಜ್ಞಾನ ಸುಜ್ಞಾನಗಳೆರಡೂ ಶಿವನೆಂದಡೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಜ್ಞಾನ ಸುಜ್ಞಾನಗಳೆರಡೂ ಶಿವನೆಂದಡೆ ಶಿವಜ್ಞಾನಿಗಳು ಮೆಚ್ಚುವರೆ ? ಶಿವ ಶಕ್ತಿಗಳೆರಡೂ ನೀನೇ ಎಂದಡೆ ಮಹಾನುಭಾವಿಗಳು ಪರಿಣಾಮಿಸುವರೆ ? ತನ್ನ ತಾನಾರೆಂಬುದನರಿಯದೆ
ಅನ್ಯವೆಲ್ಲವೂ ಬೊಮ್ಮವೆಂಬ
ಈ ಕರ್ಮದ ನುಡಿಯ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?