ಅಟ್ಟುದನಡಲುಂಟೆ ? ಸುಟ್ಟುದ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಟ್ಟುದನಡಲುಂಟೆ ? ಸುಟ್ಟುದ ಸುಡಲುಂಟೆ ? ಜ್ಞಾನಾಗ್ನಿಯಲ್ಲಿ ದಗ್ಧವಾದ ಪರಮಶಿವಯೋಗಿಗೆ ಹುಟ್ಟು ಹೊಂದೆಂಬ ಉಭಯ ಜಡತೆಯುಂಟೆ ? ಅದೆಂತೆಂದಡೆ: ``ದಗ್ಧಸ್ಯ ದಹನಂ ನಾಸ್ತಿ ಪಾಕಸ್ಯ ಪಚನಂ ನ ಹಿ ಜ್ಞಾನಾಗ್ನಿರ್ದಗ್ಧದೇಹಸ್ಯ ನ ಚ ದಾಹೋ ನ ಚ ಕ್ರಿಯಾ ಎಂದುದಾಗಿ_ ನಮ್ಮ ಗುಹೇಶ್ವರಲಿಂಗವನೊಡಗೂಡಿ
ಎರಡಳಿದು ನಿಂದ
ಮಹಾಮಹಿಮಂಗೆ ಪರಿಭವವಿಲ್ಲ ಕಾಣಿರೊ.