ಅಡವಿಯೊಳಗೆ ಕಳ್ಳರು ಕಡವಸಿದ್ಧ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಡವಿಯೊಳಗೆ ಕಳ್ಳರು ಕಡವಸಿದ್ಧ (ಕಡವಸದ?) ಸ್ವಾಮಿಯನು ಹುಡುಕಿ ಹುಡುಕಿ ಅರಸುತ್ತೈದಾರೆ._ಸೊಡರು ನಂದಿ ಕಾಣದೆ ! ಅನ್ನ ಪಾನದ ಹಿರಿಯರೆಲ್ಲರು ತಮ್ಮತಾವರಿಯದೆ
ಅಧರಪಾನವನುಂಡು ತೇಗಿ
ಸುರಾಪಾನವ ಬೇಡುತ್ತೈದಾರೆ. ಅರಿದ ಹಾರುವನೊಬ್ಬನು ಅರಿದ ತಲೆಯ ಹಿಡಿದುಕೊಂಡು
ಆಧ್ಯಾತ್ಮವಿಕಾರದ ನೆತ್ತರ ಕುಡಿದನು ನೋಡಾ_ಗುಹೇಶ್ವರಾ.