ಅಡವಿಯ ಹುಲ್ಲ ಮೇದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಡವಿಯ ಹುಲ್ಲ ಮೇದ ಪಶು ಮಡುವಿನಗ್ಛವಣಿಯ ಕುಡಿದು ನಡುಬೀದಿಯಲ್ಲಿ ಬರುತ್ತಿರಲು
ಕಡೆಯಲಿರ್ದ ಹುಲಿ ಬಂದು ಹಿಡಿಯಲು
`ನಿನ್ನೊಡವೆಯನೇನ ಬಳಸಿಕೊಂಡೆನೋ' ಎಂದು ತನ್ನೊಡೆಯನ ಕರೆಯಲು
ಹಿಡಿದ ಹುಲಿ ಬಿಟ್ಟೋಡಿತ್ತು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.