ಅಡಿಗಡಿಗೆ ದೇವರಾಣೆ, ಅಡಿಗಡಿಗೆ ಭಕ್ತರಾಣೆ,
ಅಡಿಗಡಿಗೆ ಗುರುವಿನಾಣೆ ಎಂಬ ವಚನವೆ ಹೊಲ್ಲ ! ಮುಂದೆ ಪಥಕ್ಕೆ ಸಲ್ಲರು.
ಆದಿಯಿಂದ ಬಂದ ವಚನವೆಂದು ಶರಣರ ಕೂಡೆ ಸರಸವಾಡಿದಡೆ,
ನಗುತಲಿರಿದುಕೊಂಡಡೆ ಅಲಗು ನೆಡದಿಹುದೆ ಕೂಡಲಸಂಗಮದೇವಾ