ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಡಿಗಡಿಗೆ ಲಿಂಗವನಡಿಯಡರಿ ನೋಡಿ ನೋಡಿ

ಕಂಗಳು ಕಡೆಗೋಡಿವರಿದವೆನಗಯ್ಯಾ 
ಎನ್ನ ಅಶ್ರುಜಲಂಗಳು ! ಆಲಿಕಲ್ಲ ರೂಹಿನಂತೆ
ಅರಗಿನ ಪುತ್ಥಳಿಯಂತೆ ತನು ಪುಳಕಿತವಾದ ಬೆಮರ ಬಿಂದುಗಳೆಲ್ಲಾ ! ಕೂಡಲಸಂಗನ ದರ್ಶನಸ್ಪರ್ಶದಿಂದ ಮನವೊಲಿದು ನೆರೆವ ಭರವನೇನ ಹೇಳುವೆನಯ್ಯಾ. 493