ಅತ್ತಲಿತ್ತ ಹೋಗದಂತೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅತ್ತಲಿತ್ತ ಹೋಗದಂತೆ

ಹೆಳವನ ಮಾಡಯ್ಯಾ ತಂದೆ 
ಸುತ್ತಿ ಸುಳಿದು ನೋಡದಂತೆ
ಅಂಧಕನ ಮಾಡಯ್ಯಾ ತಂದೆ
ಮತ್ತೊಂದ ಕೇಳದಂತೆ
ಕಿವುಡನ ಮಾಡಯ್ಯಾ ತಂದೆ
ನಿಮ್ಮ ಶರಣರ ಪಾದವಲ್ಲದೆ ಅನ್ಯ ವಿಷಯಕ್ಕೆಳಸದಂತೆ ಇರಿಸು
ಕೂಡಲಸಂಗಮದೇವಾ. 59