ಅದ್ಭುತವೆಂಬ ಪಿಶಾಚಿ ಮೂರುಲೋಕವನವಗ್ರಹಿಸಿತ್ತಯ್ಯಾ!
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅದ್ಭುತವೆಂಬ ಪಿಶಾಚಿ ಮೂರುಲೋಕವನವಗ್ರಹಿಸಿತ್ತಯ್ಯಾ! ಆ ಅದ್ಭುತದೊಳಗೊಂದು ಗ್ರಹ
ನಿರಂತರ ನಲಿದಾಡುತ್ತಿದ್ದಿತ್ತಯ್ಯಾ! ವಜ್ರಯೋಗಿ ಖಗರಂಧ್ರಪುರದಲ್ಲಿ
ಗುಹೇಶ್ವರಲಿಂಗವು ತಾನೇ ನೋಡಾ.