ಅಧರ ತಾಗಿದ ರುಚಿಯ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಧರ ತಾಗಿದ ರುಚಿಯ
ಉದರ ತಾಗಿದ ಸುಖವ
ಲಿಂಗಾರ್ಪಿತವ ಮಾಡಿದಡೆ ಕಿಲ್ಬಿಷ ನೋಡಿರೆ. ಓಗರ ಪ್ರಸಾದವಲ್ಲ; ಪ್ರಸಾದ ಅರ್ಪಿತವಲ್ಲ. ಇದನರಿದ ಶರಣಂಗೆ ಆಚಾರವಿಲ್ಲ
ಆಚಾರವಿಲ್ಲದ ಶರಣಂಗೆ ಲಿಂಗವಿಲ್ಲ. ಲಿಂಗವಿಲ್ಲದ ಶರಣನ ನಿಲವು; ಶಿವಸಂಪತ್ತಿನಲಾದ ಉದಯ
ವಿಪರೀತ ಸುಳುಹು ! ಪ್ರಕಟಸಂಸಾರದ ಬಳಕೆಯ ಹೊಡಕಟ್ಟಿ ಹಾಯ್ದು ನಿಬ್ಬೆರಗು ಎಸೆವುದು ಅರಿವಿನ (ಎರವಿನ?) ಘಟದಲ್ಲಿ ! ಅರ್ಪಿಸಿದ ಪ್ರಸಾದವನು ಭೇದದಿಂದ ರುಚಿಸುವನಲ್ಲ ಕೇಳಿರಯ್ಯಾ. ದಿಟವ ಬಿಟ್ಟು ಸಟೆಯಲ್ಲಿ ನಡೆಯ ನೋಡಾ. ಇಲ್ಲದ ಲಿಂಗವನುಂಟುಮಾಡಿ ಪೂಜಿಸುವ
ಬರಿಯ ಬಣ್ಣಕರೆಲ್ಲ ನೀವು ಕೇಳಿರೆ. ನೀವು ಪೂಜಕರಪ್ಪಿರಲ್ಲದೆ
ಗುಹೇಶ್ವರಲಿಂಗವಿಲ್ಲೆಂಬ ಶಬುದ ಸತ್ತು ಹುಟ್ಟುವರಿಗೆಲ್ಲಿಯದೊ ?