ಅನಂತಕಾಲ ಕಾಣಿಸದೆ ಎನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನಂತಕಾಲ ಎನ್ನ ಒಡಲ ಮರೆಯೊಳಗೆ ಅಡಗಿರ್ದು ಎನಗೆ ಕಾಣಿಸದೆ ಇದ್ದುದು ಇದೇನು ನಿಮ್ಮ ಗಾರುಡವಯ್ಯಾ ! ನೀವು ನಿಮ್ಮ ಕರುಣದಿಂದೆ ಎನ್ನ ಒಡಲ ಮರವೆಯ ಒಡೆದು
ಎನ್ನ ಕಣ್ಣ ಮುಂದಣ ಸತ್ತ್ವ-ರಜ-ತಮದ ಪರದೆಯ ಹರಿಯಲೊಡನೆ ನಿಮ್ಮ ನಿತ್ಯದ ನಿಲವ ಕಂಡೆನಯ್ಯ ಅಖಂಡೇಶ್ವರಾ.