ಅನಾದಿಗಣನಾಥನ ಶಿಷ್ಯನು ಆದಿಗಣನಾಥನು. ಆದಿಗಣನಾಥನ ಶಿಷ್ಯನು ಅಧ್ಯಾತ್ಮಗಣನಾಥನು. ಅಧ್ಯಾತ್ಮಗಣನಾಥನ ಶಿಷ್ಯನು ಆತ್ಮಗಣನಾಥನು. ಆತ್ಮಗಣನಾಥನ ಶಿಷ್ಯನು ವ್ಯೋಮಸಿದ್ಧಗಣನಾಥನು ವೋಮಸಿದ್ಧಗಣನಾಥನ ಶಿಷ್ಯನು ಬಸವನೆಂಬ ಗಣನಾಥನು. ಬಸವನೆಂಬ ಗಣನಾಥನ ಶಿಷ್ಯನು ಅನಿಮಿಷನೆಂಬ ಗಣನಾಥನು. ಅನಿಮಿಷನೆಂಬ ಗಣನಾಥನ ಶಿಷ್ಯನು ಅಲ್ಲಮಪ್ರಭುವೆಂಬ ಗಣನಾಥನು. ಇಂತು ಅನಾದಿವಿಡಿದು ಬಂದ ಅನುಪಮಲಿಂಗವು
ಗುಹೇಶ್ವರನೆಂಬ ಹೆಸರನೊಳಕೊಂಡು
ಎನ್ನ ಕರಸ್ಥಲಕ್ಕೆ ಸಾಧ್ಯವಾಯಿತ್ತು ಕಾಣಾ ಸಿದ್ಧರಾಮಯ್ಯಾ.