ಅನಾದಿಯಲೊಬ್ಬ ಶರಣ; ಆಹ್ವಾನ

ವಿಕಿಸೋರ್ಸ್ದಿಂದ



Pages   (key to Page Status)   


ಅನಾದಿಯಲೊಬ್ಬ ಶರಣ; ಆಹ್ವಾನ ವಿಸರ್ಜನವಿಲ್ಲದ ಪರತತ್ವವ ಸ್ಥಾಪಿಸಿ ಪ್ರತಿಷ್ಠೆಯ ಮಾಡುವಲ್ಲಿ ಷಡುವರ್ಣಾತ್ಮಕ ಮೃಗಿ ಹುಟ್ಟಿದಳು ನೋಡಾ ! ಆ ಮೃಗಿಯೊಳು ಪಂಚಾಂಗ ಪಂಚತಂಡದವರೆಲ್ಲ ಹುಟ್ಟಿ ವರ್ತಿಸಿ ಲಯವಾಗಿ
ಮತ್ತೆ ಪಲ್ಲವಿಸುತಿರ್ದರು ನೋಡಾ ! ಆ ಪರತತ್ವದ ಲೀಲೆಯನು ಆ ಶರಣನೆ ಬಲ್ಲ ಗುಹೇಶ್ವರಾ