ಅನಿಕೇತನ

ವಿಕಿಸೋರ್ಸ್ ಇಂದ
Jump to navigation Jump to search

ಓ ನನ್ನ ಚೇತನ, ಆಗು ನೀ ಅನಿಕೇತನ ರೂಪರೂಪಗಳನು ದಾಟಿ, ನಾಮಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವ ದೀಟಿ, ಓ ನನ್ನ ಚೇತನ, ಆಗು ನೀ ಅನಿಕೇತನ

ನೂರು ಮತದ ಹೊಟ್ಟ ತೂರಿ, ಎಲ್ಲ ತತ್ವದೆಲ್ಲೆ ಮೀರಿ, ನಿರ್ದಿಗಂತವಾಗಿ ಏರಿ, ಓ ನನ್ನ ಚೇತನ, ಆಗು ನೀ ಅನಿಕೇತನ

ಎಲ್ಲಿಯೂ ನಿಲ್ಲದಿರು, ಮನೆಯನೆಂದೂ ಕಟ್ಟದಿರು, ಕೊನೆಯನೆಂದು ಮುಟ್ಟದಿರು, ಓ ಅನಂತವಾಗಿರು, ಓ ನನ್ನ ಚೇತನ, ಆಗು ನೀ ಅನಿಕೇತನ

ಅನಂತ ತಾನ್ ಅನಂತವಾಗಿ, ಆಗುತಿಹನೆ ನಿತ್ಯಯೋಗಿ, ಅನಂತ ನೀ ಅನಂತವಾಗು, ಆಗು ಆಗು ಆಗು ಆಗು, ಓ ನನ್ನ ಚೇತನ, ಆಗು ನೀ ಅನಿಕೇತನ ಕವನ ಸಂಕಲನಗಳು

"https://kn.wikisource.org/w/index.php?title=ಅನಿಕೇತನ&oldid=86207" ಇಂದ ಪಡೆಯಲ್ಪಟ್ಟಿದೆ